'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ' ಎಂದರು.

ಬದುಕಲು ಸ್ವಾರ್ಥ ಹೆಚ್ಚಾಗಿದೆ. ಎಲ್ಲ ವಿಚಾರಗಳಿಗೂ ಜಾತಿ ಜಾತಿ ಎನ್ನುವವರು ಜೀವದ ವಿಚಾರ ಬಂದಾಗ ಮಾತ್ರ ಬೇರಾಗಿ ಬಿಡುತ್ತಾರೆ. ಆಸ್ಪತ್ರೆಯಲ್ಲಿ ಜೀವ ಉಳಿದರೆ ಸಾಕು.. ಯಾರ ರಕ್ತವನ್ನಾದರೂ ನೀಡಿ ಎನ್ನುತ್ತಾನೆ. ಮನುಷ್ಯ ಸ್ವಾರ್ಥಿಯಾಗುತ್ತಿದ್ದಾನೆ, ರಾಜ್ಯದ ಅಭಿವೃದ್ಧಿಗಾಗಿ ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು

ಇದೇ ವೇಳೆ ಈ ಹಿಂದೆ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದರು. "ಕೆಲವರು ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ? ಎಂದರು.

CM Siddaramaiah
'ಬಿಜೆಪಿಯೇತರ ರಾಜ್ಯಗಳು ಯಾವಾಗಲೂ...': ಕೇಂದ್ರದ ಪ್ರವಾಹ ಪರಿಹಾರದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ

ಕೋಮು ಸಂಘರ್ಷದಲ್ಲಿ ನಂಬರ್ 1 ಇತ್ತು

ಅಂತೆಯೇ 'ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ಒನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಇಲ್ಲಿ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ, ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು ಎಂದರು.

ಯಾವ ಧರ್ಮವೂ ದ್ವೇಷಿಸಿ ಅನ್ನಲ್ಲ

ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ, ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ, ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು ಎಂದು ಹೇಳಿದರು.

ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ

'ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ' ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com