ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ...
ವೈದ್ಯ ನಾಗರಾಜ್ ಮನ್ನೆ
ವೈದ್ಯ ನಾಗರಾಜ್ ಮನ್ನೆ
Updated on

ಕಲಬುರಗಿ: ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ ಓರ್ವ ಸರ್ಕಾರಿ ವೈದ್ಯಾಧಿಕಾರಿ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯಾದ ನಾಗರಾಜ್ ಅವರು RSS ಗಣವೇಷ ಧರಿಸಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. RSS ಸ್ಥಾಪನೆಯಾಗಿ ನೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಅವರನ್ನೂ ಅಮಾನತುಗೊಳಿಸಲಾಗಿತ್ತು.

ವೈದ್ಯ ನಾಗರಾಜ್ ಮನ್ನೆ
RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಅಮಾನತು; ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದ ಜಿ ಪರಮೇಶ್ವರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com