
ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.
ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್‌ಗಳು ಬಿಚ್ಚಿಟ್ಟಿವೆ.
Advertisement