
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎನ್. ಆನಂದ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಹೇಶ್ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಮಹೇಶ್ ಅವರು ಪ್ರಿಯಾಂಕ್ ಖರ್ಗೆಯವರನ್ನು ಗುಲಾಮ ಎಂದು ಸಂಬೋಧಿಸಿದ್ದು, ಜಾತಿಯನ್ನು ಅವಮಾನಿಸಿದ್ದಾರೆ. ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ತಿಳಿಸಿದ್ದಾರೆ.
ಮಹೇಶ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ಹೀಗಾಗಿ, ತನಿಖೆಗಾಗಿ ಮೈಸೂರು ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement