
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಮಾಂಧರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ನಗರದಲ್ಲಿ ಮಂಗಳವಾರ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಯ ವರದಿ ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
"ಗೊತ್ತಿಲ್ಲದ"ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೆ, ಕೇಳುತ್ತಿಲ್ಲವೇ ನಾರಿಯರ ನರಳಾಟ. ಕೀಚಕರ ಹೆಡೆಮುರಿ ಕಟ್ಟಿ, ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಯಾವಾಗ ಗೃಹ ಸಚಿವರೇ? ಎಂದು ಪ್ರಶ್ನಿಸಿದೆ.
Advertisement