ಅಕ್ರಮ ಮರಳು ದಂಧೆ: ಮಾಧ್ಯಮಗಳ ವರದಿ ಆಧರಿಸಿ CMಗೆ ಪತ್ರ ಬರೆದಿದ್ದೆ; ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ.
Basavaraj Rayareddy-Siddaramaiah
ಬಸವರಾಜ ರಾಯರೆಡ್ಡಿ-ಸಿದ್ದರಾಮಯ್ಯ
Updated on

ಬೆಂಗಳೂರು: ಅಕ್ರಮ ಮರಳು ದಂಧೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರು ಬರೆದಿರುವ ಪತ್ರವೊಂದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.

ಪತ್ರ ಸಮರ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಬಸವರಾಜ ರಾಯರೆಡ್ಡಿಯವರು ಸ್ಪಷ್ಟನೆ ನೀಡಿದ್ದಾರೆ.

ಪರವಾನಗಿ ಇಲ್ಲದೆ ಮರಳು ದಂಧೆ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳಾಗಿತ್ತು. ಈ ವರದಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ ಎಂದು ಹೇಳಿದ್ದಾರೆ.

ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ. ಇದು ಸಾಮಾನ್ಯವಾಗಿ ನಡೆಯುತ್ತಿರುವ ವಿಷಯವಾಗಿದೆ. ಇದನ್ನೇ ದೊಡ್ಡ ವಿಷಯ ಮಾಡಬೇಡಿ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಹೆಚ್ಚಾಗಿತ್ತು. ನಾವು ಭ್ರಷ್ಚಾಚಾರವನ್ನು ಹತ್ತಿಕ್ಕುತ್ತಿದ್ದೇವೆ. ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.

Basavaraj Rayareddy-Siddaramaiah
ಮರಳು ಮಾಫಿಯಾ ವಿರುದ್ಧ ಸಿಡಿದೆದ್ದ ಸಿಎಂ ಸಲಹೆಗಾರ: ದಂಧೆಕೋರರಿಗೆ ಅಧಿಕಾರಿಗಳೇ ಸಾಥ್; ಕ್ರಮಕ್ಕೆ ಬಸವರಾಜ ರಾಯರೆಡ್ಡಿ ಆಗ್ರಹ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com