ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
Karnataka government clears Rs.27,607 Crore investment proposals creating 8,704 jobs
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ.

ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಅವರು ಹೇಳಿದ್ದಾರೆ.

Karnataka government clears Rs.27,607 Crore investment proposals creating 8,704 jobs
ವಿದೇಶಿ ಬಂಡವಾಳ ಹೂಡಿಕೆ: ಮಹಾರಾಷ್ಟ್ರ ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೆ!

11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ.

ಉಳಿದಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com