ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು ಆರೋಪಿಗಳಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.
Representational image
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ನಗರದ ಹೊರವಲಯದ ಸುರತ್ಕಲ್‌ನಲ್ಲಿರುವ ದೀಪಕ್ ಬಾರ್ ಬಳಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಚೂರಿ ಇರಿತದಲ್ಲಿ ಅಂತ್ಯಗೊಂಡ ಘಟನೆ ಗುರುವಾರ ರಾತ್ರಿ ಸುಮಾರು 11 ಗಂಟೆಗೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.

ಇದೇ ವೇಳೆ, ಅಲ್ಲಿಗೆ ಬಂದಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳ ಜೊತೆ ಅವರಿಗೆ ವಾಗ್ವಾದ ಶುರುವಾಗಿದೆ. ಬಾರ್‌ನಿಂದ ಹೊರಬಂದ ನಂತರವೂ ಎರಡೂ ಗುಂಪುಗಳ ನಡುವೆ ಜಗಳ ಮುಂದುವರಿದಿದೆ. ಈ ಸಂದರ್ಭದಲ್ಲಿ, ಆರೋಪಿಗಳಲ್ಲಿ ಒಬ್ಬ ಚಾಕುವಿನಿಂದ (ಗಾಯದ ಸ್ವರೂಪ ಗಮನಿಸಿದಾಗ ಫ್ಲೆಕ್ಸ್ ಕತ್ತರಿಸುವ ಚಾಕು ಎಂದು ಶಂಕಿಸಲಾಗಿದೆ) ಮುಕ್ಷಿದ್ ಅವರ ಹೊಟ್ಟೆಗೆ ಮತ್ತು ಕಿವಿಯ ಸಮೀಪ ಇರಿದಿದ್ದಾನೆಗಿ

ತಡೆಯಲು ಬಂದ ಸ್ನೇಹಿತ ನಿಜಾಮ್ ಕೈಗೂ ಗಾಯವಾಗಿದೆ. ಅದೃಷ್ಟವಶಾತ್ ಗಾಯ ಆಳವಾಗಿರದ ಕಾರಣ ಮುಕ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

Representational image
ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!

ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅಡಿಯಲ್ಲಿ (ಕೊಲೆ ಯತ್ನ) ಪ್ರಕರಣ ದಾಖಲಿಸಲಾಗಿದೆ.

ರಾತ್ರಿಯೇ ಕಾರ್ಯಪ್ರವೃತ್ತರಾದ ಪೊಲೀಸರ ವಿಶೇಷ ತಂಡಗಳು ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿವೆ. ಸುರತ್ಕಲ್ ಠಾಣೆಯ ರೌಡಿ ಶೀಟರ್ ಹಾಗೂ ಬಜರಂಗದಳದಲ್ಲಿ ಸಕ್ರಿಯನಾಗಿರುವ ಗುರುರಾಜ್, ಆತನ ಸ್ನೇಹಿತ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com