ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳು GBA ವ್ಯಾಪ್ತಿಗೆ: DCM ಡಿ.ಕೆ ಶಿವಕುಮಾರ್

ಈಗಿರುವ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ 25 ಲಕ್ಷ ಜನಸಂಖ್ಯೆ ಇದೆ. ಅವರನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ.
DK Shivakumar
ಡಿ.ಕೆ. ಶಿವಕುಮಾರ್
Updated on

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯದ ಕುರಿತು ಚರ್ಚಿಸಲು ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ. ಮುಂಬರುವ ದಿನಗಳಲ್ಲಿಕೆಲ ಪ್ರದೇಶಗಳ ಭಾಗಗಳನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಬಿ.ಎಸ್‌.ಪಾಟೀಲ್‌ ನೇತೃತ್ವದ ಸಮಿತಿಯು ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.

ಈಗಿರುವ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ 25 ಲಕ್ಷ ಜನಸಂಖ್ಯೆ ಇದೆ. ಅವರನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ. ಎಲೆಕ್ಟ್ರಾನಿಕ್‌ ಸಿಟಿ, ವೈಟ್‌ಫೀಲ್ಡ್‌, ಏರ್‌ಪೋರ್ಟ್‌ ರಸ್ತೆ, ಯಲಹಂಕದ ಕೆಲ ಪ್ರದೇಶಗಳು ಇನ್ನೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಉಳಿದುಕೊಂಡಿವೆ. ಸಂಪೂರ್ಣವಾಗಿ ನಗರೀಕರಣಗೊಂಡಿರುವ ಪ್ರದೇಶಗಳಲ್ಲಿಅಚ್ಚುಕಟ್ಟಾದ ಯೋಜನೆ ರೂಪಿಸಬೇಕಿದೆ. ಮುಂದಿನ ದಿನಗಳಲ್ಲಿ ಆನೇಕಲ್ ಅನ್ನು ಜಿಬಿಎ ವ್ಯಾಪ್ತಿಗೆ ತರಲಾಗುವುದು. ಈಗಾಗಲೇ ಕಾವೇರಿ ನೀರನ್ನು ಒದಗಿಸಲಾಗುತ್ತಿದ್ದು, ಅಲ್ಲಿ ವಾಸಿಸುವ ಜನರಿಗೆ ಒದಗಿಸಬೇಕಾದ ಇತರ ಸೌಲಭ್ಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಆನೇಕಲ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಒಂದು ಯೋಜನೆಯನ್ನು ಆದಷ್ಟು ಬೇಗ ರೂಪಿಸಬೇಕಿದೆ ಎಂದು ತಿಳಿಸಿದರು.

DK Shivakumar
ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್

ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಮಾತನಾಡಿ, ನಾಗರಿಕ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಕೆಲವು ಸ್ಥಳಗಳಲ್ಲಿ ಡಾಂಬರು ಹಾಕಲಾಗುತ್ತಿದೆ. ಮಳೆಯಿಂದಾಗಿ ಕೆಲಸವು ಬಯಸಿದಂತೆ ನಡೆಯುತ್ತಿಲ್ಲ ಎಂದರು.

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ರಸ್ತೆ ಗುಂಡಿಗಳು ಮತ್ತು ಕಸವನ್ನು ನೀವು ನೋಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ ನಾನು ಆ ಪ್ರದೇಶಕ್ಕೆ ಭೇಟಿ ನೀಡಿದ್ದೆ. ಬಯೋಕಾನ್ ಪಂಚಾಯತ್ ವ್ಯಾಪ್ತಿಯಲ್ಲಿದೆಯೇ ಹೊರತು GBA ಅಡಿಯಲ್ಲಿ ಅಲ್ಲ ಎಂದು ಹೇಳಿದರು.

ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಮತ್ತು ಇತರ ಶಾಸಕರ ಹೇಳಿಕೆಗಳ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಸೂಕ್ತ ಸಮಯದಲ್ಲಿ ಅವರಿಗೆ ಪ್ರತಿಕ್ರಿಯಿಸುತ್ತೇನೆ ಎಂದರು.

ಆಳಂದ್ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 6,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಇದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅಧಿಕಾರಿಗಳು ಬಹಳ ಹಿಂದೆಯೇ ದೂರು ನೀಡಿದ್ದಾರೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com