ಬೆಂಗಳೂರು ಅಭಿವೃದ್ಧಿಗೆ BJP ಸಹಕಾರ ಸಿಗುತ್ತಿಲ್ಲ; ಪ್ರತಿ ವಿಚಾರದಲ್ಲೂ ತಡೆಯಾಜ್ಞೆ-ಆಕ್ಷೇಪಣೆ; ಡಿ.ಕೆ ಶಿವಕುಮಾರ್ ಬೇಸರ

ನನ್ನ ಕೈಲಾದಷ್ಟು ನಿಮಗೆ ಸಹಾಯ ಮಾಡುತ್ತೇನೆ. ಇಡೀ ವಿಶ್ವ ಈ ಬೆಂಗಳೂರನ್ನು ನೋಡುತ್ತಿದೆ. ಕೆಂಪೇಗೌಡರು ಕಟ್ಟಿರುವ ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ, ರಸ್ತೆ ಗಾತ್ರ ಮಾತ್ರ ಅಷ್ಟೇ ಇದೆ.
Dk Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನಾಗರಿಕರ ಜತೆ ಸಂವಾದ ಸಂದರ್ಭದಲ್ಲಿ ಮಾತನಾಡಿದರು. ನೀವು ಕಸದ ವಿಚಾರ ಪ್ರಸ್ತಾಪಿಸಿದ್ದೀರಿ. ಇದು ಮೂಲಭೂತ ಸಮಸ್ಯೆಯಾಗಿದ್ದು, ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ನ್ಯಾಯಾಲಯದಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡುತ್ತಿದ್ದೇವೆ.

ನನ್ನ ಕೈಲಾದಷ್ಟು ನಿಮಗೆ ಸಹಾಯ ಮಾಡುತ್ತೇನೆ. ಇಡೀ ವಿಶ್ವ ಈ ಬೆಂಗಳೂರನ್ನು ನೋಡುತ್ತಿದೆ. ಕೆಂಪೇಗೌಡರು ಕಟ್ಟಿರುವ ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ, ರಸ್ತೆ ಗಾತ್ರ ಮಾತ್ರ ಅಷ್ಟೇ ಇದೆ. ಹೀಗಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಇದನ್ನು ಬಗೆಹರಿಸಲು 117 ಕಿ.ಮೀ ಉದ್ಧದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ.

ಈಗಾಗಲೇ ಅಧಿಸೂಚನೆ ಹೊರಡಿಸಿರುವ ಜಮೀನುಗಳನ್ನು ನಾನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಷನ್ ಮಾಡುವುದಿಲ್ಲ. ಭೂಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುತ್ತೇವೆ. ಇದರ ಜೊತೆಗೆ ಟನಲ್ ರಸ್ತೆಗೆ ಮುಂದಾಗಿದ್ದು, ಅದಕ್ಕೂ ಸಾಕಷ್ಟು ಅಡಚಣೆ ಮಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡುತ್ತೇನೆ ಎಂದು ತಿಳಿಸಿದರು.

Dk Shivakumar
BMRDA ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ; ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ: DCM

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ನನಗೆ ಅರ್ಜಿ ನೀಡಲು ಯಾರಿಗೆ ಸಾಧ್ಯವಾಗಿಲ್ಲವೋ, ಅವರೆಲ್ಲರೂ ಭಾನುವಾರ (ನಾಳೆ) ಕಬ್ಬನ್ ಪಾರ್ಕ್ ನಡೆಯಲಿರುವ ಕಾರ್ಯಕ್ರಮಕ್ಕೆ ಬಂದು ಅರ್ಜಿ ನೀಡಬಹುದು. ಬೆಳಗ್ಗೆ 7ರಿಂದ 10 ಗಂಟೆವರೆಗೂ ನಾನು ಅರ್ಜಿ ಸ್ವೀಕರಿಸುತ್ತೇನೆ.

ಬೆಂಗಳೂರಿನ ಐದೂ ಪಾಲಿಕೆ ವ್ಯಾಪ್ತಿಯ ಜನರು ಬಂದು ಭೇಟಿ ಮಾಡಬಹುದು. ಮುಂದಿನ ದಿನಗಳಲ್ಲಿ ನಿರಂತರವಾಗಿ ಈ ರೀತಿಯ ಜನಸಂಪರ್ಕ ಸಭೆಗಳನ್ನು ಮಾಡಲು ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು. ಇನ್ನು ಸಾರ್ವಜನಿಕರು ತಮ್ಮ ಅಹವಾಲುಗಳನ್ನು 1533ಗೆ ಕರೆ ಮಾಡಿಯೂ ದಾಖಲಿಸಬಹುದು. ಸಾರ್ವಜನಿಕರ ಅಹವಾಲು ಬಗೆಹರಿಸಲು ಅಧಿಕಾರಿಗಳ ತಂಡ ನಿಯೋಜಿಲಾಗಿದೆ. ಎಲ್ಲರ ಸಮಸ್ಯೆ ಬಗೆಹರಿಸಲು ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಕಾನೂನು ಚೌಕಟ್ಟಿನಲ್ಲಿ ಸಾಧ್ಯವಾದಷ್ಟು ಪರಿಹಾರ ನೀಡಲಾಗುವುದು ಎಂದರು.

ಬೆಂಗಳೂರು ದೊಡ್ಡ ಗಾತ್ರದಲ್ಲಿ ಬೆಳೆದಿದೆ. ಜನಸಂಖ್ಯೆ 1.40 ಕೋಟಿಗೆ ಏರಿಕೆಯಾಗಿದೆ. 70 ಲಕ್ಷ ಜನ ನಿತ್ಯ ಬಂದು ಹೋಗುತ್ತಾರೆ. 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸಿರಲಿಲ್ಲ, ನಾನು ಬಂದ ನಂತರ ತೊರೆಕಾಡನಹಳ್ಳಿಯಿಂದ ಕಾವೇರಿ ನೀರನ್ನು ತಂದು ನಿಮಗೆ ನೀರು ಒದಗಿಸಿದ್ದೇವೆ.

ಆದರೂ ಅನೇಕರು ಇದರ ಸಂಪರ್ಕ ಪಡೆದಿಲ್ಲ. ಈ ಅವಕಾಶ ಕಳೆದುಕೊಳ್ಳಬೇಡಿ. ನೀರು ಬೇರೆಡೆಗೆ ಹೋಗುತ್ತಿದೆ. ಈ ಭಾಗದ ಜನರು ಸಂಪರ್ಕ ತೆಗೆದುಕೊಳ್ಳಿ. ಸಂಪರ್ಕ ಪಡೆಯಲು ವಿವಿಧ ಕಂತುಗಳಲ್ಲಿ ಹಣ ಪಾವತಿಗೂ ಅವಕಾಶ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com