

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು LPG ಸಿಲಿಂಡರ್ ಸ್ಫೋಟ ಪ್ರಕರಣ ಸಂಭವಿಸಿದೆ. ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆಯೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.
Advertisement