ಇದೇ ಮೊದಲ ಬಾರಿಗೆ ಅಕ್ಟೋಬರ್‌ನಲ್ಲಿ ಹಾರಂಗಿ ಜಲಾಶಯ ಭರ್ತಿ!

ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪ್ರತಿದಿನ ಭಾರಿ ಮಳೆಯಾಗುತ್ತಿದ್ದು, ಮಳೆಗಾಲವಲ್ಲದ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಜಲಾಶಯವು ಭರ್ತಿಯಾಗಿದೆ.
Water level in Harangi stands at 2,858.09 ft, against its capacity of 2,859 ft on Friday.
Updated on

ಮಡಿಕೇರಿ: ಅಕ್ಟೋಬರ್‌ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟಿನಿಂದ 5,000 ಕ್ಯೂಸೆಕ್‌ಗಳಿಗೂ ಹೆಚ್ಚು ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.

ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪ್ರತಿದಿನ ಭಾರಿ ಮಳೆಯಾಗುತ್ತಿದ್ದು, ಮಳೆಗಾಲವಲ್ಲದ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಜಲಾಶಯವು ಭರ್ತಿಯಾಗಿದೆ.

ಕಳೆದ ಒಂದು ವಾರದಿಂದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಣೆಕಟ್ಟಿನ ಸುರಕ್ಷತೆಗಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಐ.ಕೆ. ಪುಟ್ಟಸ್ವಾಮಿ ಹೇಳಿದ್ದಾರೆ.

ಕಳೆದ ಐದು ತಿಂಗಳಿನಿಂದ ಅಣೆಕಟ್ಟಿನ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶುಕ್ರವಾರದ ವೇಳೆಗೆ ನೀರಿನ ಮಟ್ಟ 2,859 ಅಡಿಗಳಿದ್ದು, ಪೂರ್ಣ ಸಾಮರ್ಥ್ಯ 2,858.09 ಅಡಿಗಳಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮೇ ತಿಂಗಳಿನಿಂದ ಮಳೆಯಾಗುತ್ತಿದ್ದು, ಪ್ರತಿದಿನವೂ ಭಾರಿ ಮಳೆಯಾಗುತ್ತಲೇ ಇದೆ. ಈ ವರ್ಷ ಜಿಲ್ಲೆಯ ಹಲವಾರು ಭಾಗಗಳಲ್ಲಿ ಈಗಾಗಲೇ 7,600 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 2,998.59 ಮಿ.ಮೀ. ಮಳೆಯಾಗಿದೆ.

Water level in Harangi stands at 2,858.09 ft, against its capacity of 2,859 ft on Friday.
ಕೃಷ್ಣರಾಜ ಸಾಗರಕ್ಕೆ ನಿರಂತರ ಒಳಹರಿವು: ಹೊರಹರಿವು ಹೆಚ್ಚಳ; ಪ್ರವಾಹದ ಎಚ್ಚರಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com