

ಬೆಂಗಳೂರು: ಏಳು ವರ್ಷದ ಬಾಲಕಿಯನ್ನು ಆಕೆಯ ಮಲತಂದೆಯೇ ಕೊಚ್ಚಿ ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮಗುವಿನ ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ಹಿಂದಿರುಗಿದಾಗ ಮಹಿಳೆ ತನ್ನ ಮಗಳು ಸಿರಿ ಶವವನ್ನು ನೋಡಿದ್ದು, ಘಟನೆಯ ನಂತರ ತಲೆಮರೆಸಿಕೊಂಡಿರುವ ಪತಿ ದರ್ಶನ್ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಆತ ಬಾಲಕಿಯನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದರು.
ಸುಮಾರು ನಾಲ್ಕು ತಿಂಗಳ ಹಿಂದೆ ವಿವಾಹವಾದ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಗಳಿದ್ದವು. ಹೀಗಾಗಿ ಈ ಕೊಲೆ ನಡೆದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಆದರೆ, ಆರೋಪಿಯನ್ನು ಬಂಧಿಸಿದ ನಂತರ ನಿಖರ ಉದ್ದೇಶ ತಿಳಿಯಲಿದ್ದು, ಆತನ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement