ಕೃಷಿ ಜಮೀನುಗಳಲ್ಲಿ ಪುಂಡಾಟ: ಖಾನಾಪುರ ರೈತರ ನಿದ್ದೆಗೆಡಿಸಿದ ಕಾಡಾನೆ

ಕಾಡಾನೆ ದಾಳಿ ಕುರಿತು ಅರಣ್ಯಾಧಿಕಾರಿಗಳಿಗೆ ಪದೇ ಪದೇ ದೂರು ನೀಡಲಾಗುತ್ತಿದ್ದು, ಸಹಾಯಕ್ಕಾಗಿ ಮನವಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ರೈತರು ಆರೋಪಿಸಿದ್ದಾರೆ.
Villagers chase a wild elephant from a field on the outskirts of Maskenatti village in Khanapur on Friday.
Updated on

ಬೆಳಗಾವಿ: ಕೃಷಿ ಭೂಮಿಯ ಮೇಲೆ ದಾಳಿ ನಡೆಸುತ್ತಿರುವ ಕಾಡಾನೆಗಳು ಬೆಳೆಗಳನ್ನು ನಾಶಪಡಿಸುತ್ತಿದ್ದು, ಈ ಬೆಳವಣಿಗೆ ಖಾನಾಪುರದ ರೈತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕಾಡಾನೆ ದಾಳಿ ಕುರಿತು ಅರಣ್ಯಾಧಿಕಾರಿಗಳಿಗೆ ಪದೇ ಪದೇ ದೂರು ನೀಡಲಾಗುತ್ತಿದ್ದು, ಸಹಾಯಕ್ಕಾಗಿ ಮನವಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ರೈತರು ಆರೋಪಿಸಿದ್ದಾರೆ.

ಕಳೆದ ಎರಡು ವಾರಗಳಿಂದ, ಮಸ್ಕೆನಟ್ಟಿ, ಭುರಾನಕಿ, ಕರಿಕಟ್ಟಿ, ಘಸ್ಟೊಲ್ಲಿ ಮತ್ತು ಹತ್ತಿರದ ಹಳ್ಳಿಗಳಿಗೆ ಕಾಡಾನೆ ನುಗ್ಗುತ್ತಿದ್ದು, ಪರಿಣಾಮ ಭತ್ತ, ಜೋಳ ಮತ್ತು ಕಬ್ಬಿನ ಬೆಳೆಗಳು ದೊಡ್ಡ ಮಟ್ಟದಲ್ಲಿ ಹಾನಿಗೊಳಗಾಗಿದೆ.

ತಿಂಗಳುಗಳ ಕಾಲ ಕಠಿಣ ಪರಿಶ್ರಮದಿಂದ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಕಾಡಾನೆಗಳು ಕೆಲವೇ ನಿಮಿಷಗಳಲ್ಲಿ ನಾಶವಾಗುತ್ತಿವೆ ಎಂದು ರೈತರು ಹೇಳಿದ್ದಾರೆ.

Villagers chase a wild elephant from a field on the outskirts of Maskenatti village in Khanapur on Friday.
ಮಡಿಕೇರಿ: ಜಾತಿ ಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಯತ್ನ

ಪ್ರತೀ ವರ್ಷ ಇದೇ ರೀತಿಯ ಪರಿಸ್ಥಿತಿ ಎದುರಾಗುತ್ತಿದೆ. ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಲೇ ಇದ್ದೇವೆ. ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಸ್ಕೆನಟ್ಟಿ ಗ್ರಾಮದ ರೈತರೊಬ್ಬರು ಹೇಳಿದ್ದಾರೆ.

ನಮ್ಮ ಜೀವನೋಪಾಯವು ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಇದೀಗ ಬೆಳೆ ನಾಶವು ನಮ್ಮನ್ನು ಸಾಲದ ಕೂಪಕ್ಕೆ ತಳ್ಳಿದೆ. ಪಟಾಕಿ ಸಿಡಿಸಿ, ಜೋರಾದ ಶಬ್ಧ ಮಾಡಿ ಆನೆಗಳ ಓಡಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ, ವಿಫಲವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com