

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ಕೇಸ್ ಮುಚ್ಚಿಹಾಕಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಿದ್ದಾರೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಐಸ್ ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚಕರ ಪರ ನಿಂತಿದ್ದು, ಕೇಸ್ ಸೆಟಲ್ ಮೆಂಟ್ ಮಾಡುವಂತೆ ಒತ್ತಡ ಹಾಕಿದ್ದಾರೆ.
ಈ ಆಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಜಮ್ಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದೆ.
ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ, ರಾಜ್ಯದ ರೈತರಿಗೆ ಮೋಸ ಮಾಡಲು ಆತ್ಮಸಾಕ್ಷಿ ಹೇಗೆ ಒಪ್ಪುತ್ತದೆ? ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸುವುದನ್ನು ಬಿಟ್ಟು ಪೊಲೀಸ್ ಇಲಾಖೆ ಸೆಟಲ್‌ಮೆಂಟ್ ಕೇಂದ್ರಗಳಾಗಿವೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಸದಾ ರೌಡಿಗಳು ಹಾಗೂ ವಂಚಕರ ಪರ ವಹಿಸುವ ಸೆಟಲ್‌ಮೆಂಟ್ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾ ಮಾಡಿ. ನಿಮ್ಮ ನೈತಿಕತೆ ಪ್ರದರ್ಶಿಸಿ ಎಂದು ಒತ್ತಾಯಿಸಿದೆ.
Advertisement