

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿಟ್ಟುಕೊಂಡು ಮೊಬೈಲ್ ಕಳ್ಳಸಾಗಣೆ ಮಾಡುತತಿದ್ದ ಜೈಲಿನ ವೀಕ್ಷಕನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಜೈಲು ಸಿಬ್ಬಂದಿಯನ್ನು ಅಮರ್ ಪ್ರಾಂಜೆ (29) ಎಂದು ಗುರ್ತಿಸಲಾಗಿದೆ. ಅಮರ್ ಅಕ್ಟೋಬರ್ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್ ಹೋಗಲು ಮುಂದಾಗಿದ್ದಾನೆ.
ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್, ಇಯರ್ ಫೋನ್ ಪತ್ತೆಯಾಗಿದೆ.
ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ವಿರುದ್ಧ ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement