

ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ನವೆಂಬರ್ 2, 2025 ರಿಂದ ಡಿಸೆಂಬರ್ 15, 2025 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಮಾರ್ಗವನ್ನು ಬಂದ್ ಮಾಡುತ್ತಿದೆ.
ಈ ಕಾರಣದಿಂದಾಗಿ ಈ ಕೆಳಗೆ ತಿಳಿಸಲಾದ ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಅವುಗಳ ಅವಧಿ ಈ ಕೆಳಗಿನಂತಿವೆ:
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್'ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್'ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ವೀಕ್ಲಿ ಎಕ್ಸ್'ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್–ಯಶವಂತಪುರ ವೀಕ್ಲಿ ಎಕ್ಸ್'ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ವೀಕ್ಲಿ ಎಕ್ಸ್'ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಎಕ್ಸ್'ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
Advertisement