Tunnel Road project: ಲಾಲ್‌ಬಾಗ್ ನಲ್ಲಿ ಮರಗಳಿಗೆ ಕತ್ತರಿ, ಪಿಐಎಲ್, ಹೈಕೋರ್ಟ್ ಹೇಳಿದ್ದೇನು?

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು
 Lalbagh
ಲಾಲ್ ಬಾಗ್
Updated on

ಬೆಂಗಳೂರು: ಸುರಂಗ ರಸ್ತೆ ಮಾರ್ಗ ಯೋಜನೆಗಾಗಿ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ ಮರಗಳನ್ನು ಕಡಿಯುವ ಪ್ರಸ್ತಾವನೆ ಬಂದಿದೆಯೇ ಎಂದು ಕರ್ನಾಟಕ ಹೈಕೋರ್ಟ್ ಶನಿವಾರ ರಾಜ್ಯ ಸರ್ಕಾರವನ್ನು ಕೇಳಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು ಮತ್ತು ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಸುರಂಗ ಯೋಜನೆಗಾಗಿ ಲಾಲ್‌ಬಾಗ್‌ನಲ್ಲಿ 6.5 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಬೆಳವಾಡಿ ಪರ ವಕೀಲರು ಆರೋಪಿಸಿದರು. ಜನರ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ಕಾಯ್ದೆ 1975 ಅನ್ನು ಉಲ್ಲಂಘಿಸಿ ಮರಗಳನ್ನು ಕತ್ತರಿಸುವ ಸಾಧ್ಯತೆಯಿದೆ. ಅಲ್ಲದೇ ಈ ಯೋಜನೆಯು ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವೆಂದು ಘೋಷಿಸಲಾದ ಲಾಲ್‌ಬಾಗ್ ಬಂಡೆಗೆ ಅಪಾಯವನ್ನುಂಟುಮಾಡಬಹುದು ಎಂದು ಅವರು ಹೇಳಿದರು.

ನಂತರ, "ನೀವು ಯಾವುದಾದರೂ ಮರಗಳನ್ನು ಕಡಿಯಲು ಯೋಜಿಸುತ್ತಿದ್ದೀರಾ? ನ್ಯಾಯಾಲಯವು ಸರ್ಕಾರಿ ವಕೀಲರನ್ನು ಕೇಳಿತು. ಮರಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಿ. ಲಾಲ್ ಬಾಗ್ ಒಳಗೆ ಮರಗಳನ್ನು ಕಡಿಯುವ ಪ್ರಸ್ತಾಪವಿದ್ದರೆ ಸಲಹೆ, ಸೂಚನೆಗಳನ್ನು ತೆಗೆದುಕೊಳ್ಳುವಂತೆ ತಿಳಿಸಿತು.

ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಯನ್ನು (ಹೆಬ್ಬಾಳದಿಂದ ಸಿಲ್ಕ್ ಬೋರ್ಡ್) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಮೂಲಕ ಸರ್ಕಾರವು 19,000 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಕಾನೂನುಬಾಹಿರವಾಗಿ ಮಾಡಲು ಉದ್ದೇಶಿಸಿದೆ ಎಂದು ಆರೋಪಿಸಿರುವ ಅರ್ಜಿದಾರರು, ಯೋಜನೆಗೆ ಸಂಬಂಧಿಸಿದ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ, ಬೃಹತ್ ಬೆಂಗಳೂರು ಪ್ರಾಧಿಕಾರ ಮತ್ತು ಬಿ-ಸ್ಮೈಲ್ ಅಧಿಕಾರಿಗಳು ಅಕ್ಟೋಬರ್ ಮೊದಲ ವಾರದಲ್ಲಿ ಲಾಲ್‌ಬಾಗ್‌ನಲ್ಲಿ ಪರಿಶೀಲನೆ ನಡೆಸಿದ್ದು, ಮರಗಳನ್ನು ಕಡಿಯಲು ಕೆಲವು ಪ್ರದೇಶಗಳನ್ನು ಗುರುತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಯೋಜನೆಯು ಕಾರ್ಯಗತಗೊಂಡರೆ, ಬೆಂಗಳೂರಿನ ನೀರಿನ ಭದ್ರತೆಯ ಮೇಲೆ ಪರಿಣಾಮ ಬೀರುವ ಜಲಚರ ಹರಿವಿನ ಮಾದರಿಯನ್ನು ಶಾಶ್ವತವಾಗಿ ಬದಲಾಯಿಸುತ್ತದೆ. ಪರಿಸರದ ಮೇಲಾಗುವ ದುಷ್ಪರಿಣಾಮ ಮೌಲ್ಯಮಾಪನ ಮಾಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಯೋಜನೆಗೆ ನೀಡಿರುವ ಮಂಜೂರಾತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಅರ್ಜಿದಾರರು ಟೆಂಡರ್‌ ಕರೆಯುವ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

 Lalbagh
ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com