

ಬೆಂಗಳೂರು: ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. 36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದರು.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್‌ಪೆಕ್ಟರ್ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಅಮಾನತು ಮಾಡಲಾಗಿದ್ದು ತನಿಖೆ ನಡೆಯುತ್ತಿದೆ ಎಂದರು.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನಂತರ 1 ವರ್ಷದಲ್ಲಿ 3 ಬಾರಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
Advertisement