

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಜೈಲಿನಲ್ಲಿ ಹಾಸಿಗೆ, ತಲೆ ದಿಂಬು, ಬೆಡ್ ಶೀಟ್ ನೀಡಬೇಕು. ಜೈಲಿನಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಬೇಕು ಎನ್ನುವುದು ಸೇರಿದಂತೆ ಇತರೆ ಮೂಲಸೌಕರ್ಯ ನೀಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಬೆಂಗಳೂರಿನ 57 ಸಿಸಿಎಚ್ ಕೋರ್ಟ್ ಆದೇಶ ನೀಡಿದೆ.
ಆದರೆ ನಟ ದರ್ಶನ್ ಬೇಡಿಕೆಗಳಿಗೆ ಕೋರ್ಟ್ ಮನ್ನಣೆ ನೀಡಿಲ್ಲ. ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವ ಆಯ್ಕೆ ಜೈಲು ಅಧಿಕಾರಿಗಳಿಗೆನೀಡಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ.
ಅಕ್ಟೋಬರ್ 31 ರಂದು ನಟ ದರ್ಶನ್, ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ವಿರುದ್ಧ ಯಾವ್ಯಾವ ಸೆಕ್ಷನ್ ಗಳಡಿ ಆರೋಪ ಹೊರಿಸಲಾಗುತ್ತೆ ಎನ್ನುವುದನ್ನು ಕೋರ್ಟ್ ತಿಳಿಸಲಿದೆ.
ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಎ 5 ನಂದೀಶ್ ಅರ್ಜಯನ್ನು ಕೋರ್ಟ್ ವಜಾಗೊಳಿಸಿದೆ. ಶೀಘ್ರ ಸಾಕ್ಷ್ಯ ವಿಚಾರಣೆ ಕೋರಿ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಸಾಕ್ಷ್ಯ ವಿಚಾರಣೆಗೆ ಎರಡೂ ಕಡೆಯವರು ಸಹಕರಿಸಲು ಕೋರ್ಟ್ ಸೂಚನೆ ನೀಡಿದೆ. ಸೆಕ್ಷನ್ 91 ರ ಅಡಿ ಜೈಲಿನ ರಿಜಿಸ್ಟರ್ ಹಾಜರಿ ಕೋರಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
Advertisement