

ನವದೆಹಲಿ: ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್ ರೈಲು ಶೀಘ್ರದಲ್ಲೇ ಹಳಿ ಮೇಲೆ ಓಡಲಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಸುಳಿವು ನೀಡಿದ್ದಾರೆ.
ಇಂದು ರೈಲ್ವೆ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ, ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ಪ್ರಸ್ತಾವಿತ ಸೂಪರ್‌ಫಾಸ್ಟ್ ರೈಲು ಎರಡರ ಬಗ್ಗೆಯೂ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ, ರೈಲ್ವೆ ಮಂಡಳಿ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿದ್ದು, ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್ ರೈಲಿಗೆ ನೀಡಿದ ಬೆಂಬಲಕ್ಕಾಗಿ ಅವರಿಗೆ ಧನ್ಯವಾದ ತಿಳಿಸಿದೆ ಎಂದು ಹೇಳಿದ್ದಾರೆ.
ರೈಲು ಆರಂಭ ಮತ್ತು ವೇಳಾಪಟ್ಟಿಯನ್ನು ಶೀಘ್ರದಲ್ಲೇ ಸಾರ್ವಜನಿಕಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿ ಅಧ್ಯಕ್ಷರ ತಮಗೆ ಭರವಸೆ ನೀಡಿದ್ದಾರೆ. ತೇಜಸ್ವಿ ಸೂರ್ಯ X' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದೇ ವೇಳೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ-ಕರ್ನಾಟಕ(ಕೆ-ರೈಡ್)ಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಿಜೆಪಿ ಸಂಸದ, ಕುಮಾರ್ ಅವರಿಗೆ ಒತ್ತಾಯಿಸಿದರು.
Advertisement