

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತೀವ್ರ ಜ್ವರ ಮತ್ತು ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜಭವನದ ಮೂಲಗಳು ಗುರುವಾರ ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಗೆಹ್ಲೋಟ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜಭವನದ ಮೂಲಗಳು ಕನ್ನಡಪ್ರಭ.ಕಾಮ್ ತಿಳಿಸಿವೆ.
"ಶುಕ್ರವಾರದೊಳಗೆ ರಾಜ್ಯಪಾಲರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ನಮಗೆ ತಿಳಿಸಿರುವುದಾಗಿ" ಎಂದು ರಾಜಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗೆಹ್ಲೋಟ್ ಇತ್ತೀಚಿಗೆ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಅವರು ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆಯಾಸದಿಂದಾಗಿ ಅವರಿಗೆ ಜ್ವರದ ಜೊತೆಗೆ ಬೆನ್ನು ನೋವು ಕಾಣಿಸಿಕೊಂಡಿರಬಹುದು" ಎಂದು ಅವರು ಹೇಳಿದ್ದಾರೆ.
Advertisement