ರಾಜ್ಯ

Namma Metro: ಕೆಟ್ಟು ನಿಂತ ಮೆಟ್ರೋ ರೈಲು; ಚಲ್ಲಘಟ್ಟ-ವೈಟ್‌ಫೀಲ್ಡ್ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್​ಸಿಎಲ್ (BMRCL) ಅಧಿಕಾರಿಗಳು, ವಿಳಂಬಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ಮುಂದಿನ ಮಾಹಿತಿ ಸಿಕ್ಕ ತಕ್ಷಣ ನಿಮಗೆ ತಿಳಿಸುತ್ತೇವೆ ಎಂದು ಮೆಟ್ರೋ ರೈಲಿನಲ್ಲಿ ಅನೌನ್ಸ್ ಮಾಡಲಾಗಿದೆ.

Namma Metro: ಕೆಟ್ಟು ನಿಂತ ಮೆಟ್ರೋ ರೈಲು; ಚಲ್ಲಘಟ್ಟ-ವೈಟ್‌ಫೀಲ್ಡ್ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ
ಮೆಟ್ರೊ ಸಂಚಾರದಲ್ಲಿ ವಿಳಂಬವಾಗಿ ನಿಲ್ದಾಣದಲ್ಲಿ ಜನಜಂಗುಳಿ
Published On :

ಬೆಂಗಳೂರು: ಮೆಟ್ರೊ ರೈಲು ಕೆಟ್ಟು ನಿಂತು ಚಲ್ಲಘಟ್ಟದಿಂದ ವೈಟ್ ಫೀಲ್ಡ್​​ಗೆ ಸಂಚರಿಸುವ ನೇರಳೆ ಮಾರ್ಗದಲ್ಲಿ ಇಂದು ಗುರುವಾರ ಬೆಳಗ್ಗೆ ಸಂಚಾರ ವ್ಯತ್ಯಯವಾಗಿದೆ. ಚಲ್ಲಘಟ್ಟದಿಂದ ಹಾಗೂ ವೈಟ್​ಫೀಲ್ಡ್​​ನಿಂದ ಹೊರಟ ಮೆಟ್ರೋ ರೈಲುಗಳು ಅವು ನಿಂತಿದ್ದ ನಿಲ್ದಾಣಗಳಲ್ಲಿಯೇ ಸುಮಾರು 10 ನಿಮಿಷಗಳಿಗೂ ಹೆಚ್ಚು ಸಮಯ ನಿಂತು ನಂತರ ಪ್ರಯಾಣ ಆರಂಭಿಸಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಆರ್​ಸಿಎಲ್ (BMRCL) ಅಧಿಕಾರಿಗಳು, ವಿಳಂಬಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ಮುಂದಿನ ಮಾಹಿತಿ ಸಿಕ್ಕ ತಕ್ಷಣ ತಿಳಿಸುತ್ತೇವೆ ಎಂದು ಮೆಟ್ರೋ ರೈಲಿನಲ್ಲಿ ಅನೌನ್ಸ್ ಮಾಡಲಾಗಿದೆ. ಸದ್ಯ ಮೆಟ್ರೋ ರೈಲು ಸಂಚಾರ ಶುರುವಾಗಿದ್ದು, ವಿಳಂಬವಾಗಿ ಸಂಚರಿಸುತ್ತಿದೆ.

ಮೆಟ್ರೋ ರೈಲು ಸಂಚಾರ ವ್ಯತ್ಯಯಕ್ಕೆ ಕಾರಣವೇನು? ಬಿಎಂಆರ್​​ಸಿಎಲ್ ಹೇಳಿದ್ದೇನು?

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ರೈಲು ಸಂಚಾರ ವಿಳಂಬವಾಗಿದೆ. ಬೆಳಗ್ಗೆ 8.50ರಿಂದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಚಲ್ಲಘಟ್ಟ-ವೈಟ್ ಫೀಲ್ಡ್ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ. ವಿಜಯನಗರ -ಹೊಸಹಳ್ಳಿ ನಿಲ್ದಾಣಗಳ ನಡುವೆ ವ್ಯತ್ಯಯವಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ರೈಲೊಂದು ಕೆಟ್ಟು ನಿಂತಿದ್ದೇ ಇದಕ್ಕೆ ಕಾರಣ. ಕೆಟ್ಟುನಿಂತ ರೈಲನ್ನು ಚಲ್ಲಘಟ್ಟ ನಿಲ್ದಾಣಕ್ಕೆ ಸ್ಥಳಾಂತರಿಸಲಾಗುತ್ತಿದೆ. ಆನಂತರ ಮೆಟ್ರೋ ರೈಲು ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.