

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ, ನವೆಂಬರ್ 1 ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಶುಕ್ರವಾರ ಘೋಷಿಸಿದೆ.
ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ಅದು ಹೇಳಿದೆ.
'ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆಯಲ್ಲಿ ತಿಳಿಸಿದೆ.
ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ.
Advertisement