

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.
Advertisement