ರಾಜ್ಯ

ಕುಡಚಿ ಕಾಂಗ್ರೆಸ್ MLA​ ಪುತ್ರನಿಗೆ ಡಿ.ಕೆ ಶಿವಕುಮಾರ್ ಹೆಸರು ನಾಮಕರಣ! ವಿಶೇಷ ಏನು ಗೊತ್ತಾ?

ಡಿಕೆ ಶಿವಕುಮಾರ್ ಅವರೇ ಹೆಸರು ನಾಮಕರಣ ಮಾಡಿರುವುದು ವಿಶೇಷವಾಗಿದೆ. ಡಿಕೆ ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಡಿಕೆ ಶಿವಕುಮಾರ್ ಮಗುವಿಗೆ ತನ್ನ ಹೆಸರಿಟ್ಟ ಶುಭ ಹಾರೈಸಿದ್ದಾರೆ.

ಕುಡಚಿ ಕಾಂಗ್ರೆಸ್ MLA​ ಪುತ್ರನಿಗೆ ಡಿ.ಕೆ ಶಿವಕುಮಾರ್ ಹೆಸರು ನಾಮಕರಣ! ವಿಶೇಷ ಏನು ಗೊತ್ತಾ?
ಶಾಸಕ ಮಹೇಂದ್ರ ತಮ್ಮಣ್ಣನವರ್ ಮಗನೊಂದಿಗೆ ಡಿಕೆ ಶಿವಕುಮಾರ್
Published On :

ಬೆಂಗಳೂರು: ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಮಗನಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರನ್ನಿಟ್ಟಿದ್ದಾರೆ.

ಡಿಕೆ ಶಿವಕುಮಾರ್ ಅವರೇ ಹೆಸರು ನಾಮಕರಣ ಮಾಡಿರುವುದು ವಿಶೇಷವಾಗಿದೆ. ಡಿಕೆ ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಡಿಕೆ ಶಿವಕುಮಾರ್ ಮಗುವಿಗೆ ತನ್ನ ಹೆಸರಿಟ್ಟ ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ! ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.