

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದ್ದು, ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್ ಅವರು ಇತ್ತೀಚೆಗಷ್ಟೇ ಮೃತ ಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಅವಘಡ ನಡೆದಿದೆ.
Advertisement