
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ.
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಶಾಲಾ ಆವರಣದಲ್ಲಿ ಮತ್ತು ಲೋಕಾಪುರ ಬಳಿಯ ಹೊಲದಲ್ಲಿ ಬಾಲಕಿಯೊಂದಿಗೆ ಕೆಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಈ ಸಂಬಂಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಬಾಲಕ ಅಪ್ರಾಪ್ತ ವಯಸ್ಕನಾಗಿರುವುದರಿಂದ, ಅವನನ್ನು ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಗು ಎಂದು ಪರಿಗಣಿಸಲಾಗುವುದು. ಶಶಿಧರ್ ಅವರು ಈಗಾಗಲೇ ಬಾಗಲಕೋಟೆ ಎಸ್‌ಪಿ ಜೊತೆ ಮಾತನಾಡಿದ್ದು, ಸೋಮವಾರ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಂಡಿದ್ದಾರೆ. ನಂತರ, ಬಾಲಕನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.
Advertisement