Yelahanka: ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು.
The police said the workers, employed by a private real estate group, were carrying out excavation work when the mud collapsed because of heavy rain.
ಮಣ್ಣು ಕುಸಿತವಾಗಿರುವುದು.
Updated on

ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ.

ಜೆ ಶಿವ (30) ಮತ್ತು ಮಾಂಡುಸೂದನ್ ರೆಡ್ಡಿ (55) ಎಂದು ಗುರ್ತಿಸಲಾಗಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ.

ಈ ಕುಸಿತದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದ್ದು, ಆಂಧ್ರಪ್ರದೇಶ ಮೂಲದ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆತ ಕೂಡ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇದರೊಂದಿಗೆ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ಸಂಬಂಧ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

The police said the workers, employed by a private real estate group, were carrying out excavation work when the mud collapsed because of heavy rain.
Rain Alert: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com