ಗಣೇಶ ವಿಸರ್ಜನೆ ವೇಳೆ ದುರಂತ, 3 ಸಾವು: 'ನಾಗವಲ್ಲಿ' ಹಾಡಿಗೆ ಹೆಜ್ಜೆ ಹಾಕುತ್ತಿದ್ದವ ದಿಢೀರ್ ಕುಸಿದು ಬಿದ್ದ! Video

ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.
Tragedy during Ganesh idol immersion
ಗಣೇಶ ವಿಸರ್ಜನೆ ವೇಳೆ ದುರಂತ
Updated on

ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಹೌದು.. ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿಯಾಗಿದ್ದು, ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

ನಾಗವಲ್ಲಿ ಹಾಡಿಗೆ ಹೆಜ್ಜೆ ಹಾಕುತ್ತಿದ್ದವನ ಸಾವು

ಇತ್ತ ಚಿಕ್ಕಬಳ್ಳಾಪುರದಲ್ಲೂ ಇಂತಹುದೇ ಘಟನೆ ವರದಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ 40 ವರ್ಷದ ಲಕ್ಷ್ಮಿಪತಿ ಎಂಬ ವ್ಯಕ್ತಿ ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.

ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

3ನೇ ಸಾವು

ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಆಟೋ ರಾಜು(34) ಮೃತ ವ್ಯಕ್ತಿ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದ. ಪೂಜೆ ಸಲ್ಲಿಸುತ್ತಾ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ರಾಜುನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com