
ಯಾದಗಿರಿ: ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಹೌದು... ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಯಾದಗಿರಿ ಸಂಚಾರಿ ಠಾಣೆ ಕಾನ್ಸ್ ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ಇಬ್ಬರೂ ತಮ್ಮ ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement