ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್‌

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.
S Ravikumar And siddaramaiah
ಎಸ್. ರವಿ ಕುಮಾರ್ ಮತ್ತು ಸಿದ್ದರಾಮಯ್ಯ
Updated on

ಶಿವಮೊಗ್ಗ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಸ್.ರವಿಕುಮಾರ್ ತಿಳಿಸಿದ್ದಾರೆ. ನಿಗಮದಲ್ಲಿ ಹಣಕಾಸಿನ ಶಿಸ್ತು ಹಾಗೂ ಪಾರದರ್ಶಕತೆ ರೂಪಿಸಿದ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದೂ ಆರೋಪಿಸಿದರು.

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು. ಮುಖ್ಯಮಂತ್ರಿ ಸೂಚಿಸಿದರೆ, ನಾನು ಶೀಘ್ರದಲ್ಲೇ ಬೆಂಗಳೂರಿಗೆ ಹೋಗಿ ನನ್ನ ರಾಜೀನಾಮೆ ನೀಡುತ್ತೇನೆ" ಎಂದು ಅವರು ಹೇಳಿದರು.

ನಿಗಮದ ಅಧ್ಯಕ್ಷನಾದ ನಂತರ ನಾನು ಯಾರ ಬಳಿಯೂ ಕಮೀಷನ್‌ ಪಡೆದಿಲ್ಲ. ಯಾರಿಗೂ ಕೊಟ್ಟಿಲ್ಲ. ಎಐ ತಂತ್ರಜ್ಞಾನ ಬಳಸಿಕೊಂಡು ನನ್ನ ಮಾತುಗಳನ್ನು ತಿರುಚಲಾಗಿದೆ. ಎಂದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಈ ಪಿತೂರಿಯಲ್ಲಿ ನಿಗಮದ ಅಧಿಕಾರಿಗಳ ಪಾತ್ರವನ್ನು ಅಲ್ಲಗಳೆಯಲಾಗದು. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಏನೆಂಬುದನ್ನು ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸುವಂತೆ ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.

ಈ ಹಿಂದೆ ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹು ದೊಡ್ಡ ಹಗರಣವೇ ನಡೆದಿತ್ತು. ಅಧ್ಯಕ್ಷ ಸ್ಥಾನ ಮುಳ್ಳಿನ ಕುರ್ಚಿ ಎಂಬ ಅರಿವು ನನಗಿತ್ತು. ಭ್ರಷ್ಟಾಚಾರ ತಡೆಯಲು ಬಿಗಿ ಕ್ರಮಗಳನ್ನು ಅನುಸರಿಸಿದ್ದೆ. ಈ ಬೆಳವಣಿಗೆಗಳನ್ನು ಸಹಿಸಿಕೊಳ್ಳಲಾಗದ ಕೆಲವರು ಸಂಚು ರೂಪಿಸಿದ್ದಾರೆ ಎಂದಿದ್ದಾರೆ.

S Ravikumar And siddaramaiah
ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ನಿಗಮ ಅಧ್ಯಕ್ಷರಿಂದ ಶೇ.60 ಕಮಿಷನ್‌ಗೆ ಬೇಡಿಕೆ, ಸಿಎಂ ರಾಜೀನಾಮೆಗೆ BJP ಆಗ್ರಹ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com