Greater Bengaluru Authority: ಐದು ಪಾಲಿಕೆಗಳಿಗೆ 300 ಕೋಟಿ ರೂ ಅನುದಾನ ಹಂಚಿಕೆ, 500 ಎಂಜಿನಿಯರ್‌ಗಳ ನೇಮಕ!

5 ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್.1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು.
DK shivkumar
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌
Updated on

ಬೆಂಗಳೂರು: ನೂತನವಾಗಿ ರಚನೆಯಾಗಿರುವ ಐದು ನಗರ ಪಾಲಿಕೆಯ ಆಡಳಿತ ನಿರ್ವಹಣೆ, ಅಧಿಕಾರಿ ಸಿಬ್ಬಂದಿಯ 3 ತಿಂಗಳ ವೇತನಕ್ಕೆ 300 ಕೋಟಿ ರು. ಬಿಡುಗಡೆಯೊಂದಿಗೆ 500 ಎಂಜಿನಿಯರ್‌ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್.1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಪ್ರತಿ ನಿಗಮದಲ್ಲಿ ರಸ್ತೆ ಮತ್ತು ಆಡಳಿತಾತ್ಮಕ ಅಂಶಗಳನ್ನು ನೋಡಿಕೊಳ್ಳಲು 500 ಎಂಜಿನಿಯರ್‌ಗಳನ್ನು ನಿಯೋಜಿಸಲು ಅನುಮೋದನೆ ನೀಡಲಾಗಿದೆ. ಆಡಳಿತಾತ್ಮಕ ವೆಚ್ಚಗಳು, ವೇತನ ಮತ್ತು ಪಿಂಚಣಿಗಳಿಗಾಗಿ ಸುಮಾರು 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿ ನಿಗಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು, ಒಬ್ಬ ಕೆಎಎಸ್, ಇಬ್ಬರು ಮುಖ್ಯ ಎಂಜಿನಿಯರ್‌ಗಳು ಮತ್ತು ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡುತ್ತಾರೆ. ನಿಗಮಗಳು ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುತ್ತವೆ. ಆಯಾ ನಿಗಮಗಳ ವ್ಯಾಪ್ತಿಯಲ್ಲಿರುವ ರಸ್ತೆಗಳು, ಚರಂಡಿಗಳು ಮತ್ತು ಇತರ ಸಮಸ್ಯೆಗಳನ್ನು ಗುರುತಿಸುವ ಕೆಲಸವು ಇದರಲ್ಲಿ ಸೇರಿರುತ್ತದೆ ಎಂದು ಹೇಳಿದರು.

DK shivkumar
ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ 500 ಕಾರ್ಪೊರೇಟರ್‌ಗಳು; ಶೇ 50 ರಷ್ಟು ವಾರ್ಡ್‌ಗಳು ಮಹಿಳೆಯರಿಗೆ ಮೀಸಲು

ಐದು ನಿಗಮಗಳ ವ್ಯಾಪ್ತಿಯಲ್ಲಿ ಹೊಸ ಪ್ರದೇಶಗಳನ್ನು ಸೇರಿಸುವ ಕುರಿತ ಪ್ರಶ್ನೆಗೆ ಉತ್ತರಿಸಿ, ಭವಿಷ್ಯದಲ್ಲಿ ಇತರ ಪ್ರದೇಶಗಳ ವಿಲೀನದ ಬಗ್ಗೆಯೂ ಚಿಂತನೆಗಳು ಬರಬಹುದು ಎಂದು ಹೇಳಿದರು.

ಹೊಸ ಆಯುಕ್ತರ ಜವಾಬ್ದಾರಿಗಳ ಕುರಿತು ಮಾತನಾಡಿ, "ನೂತನ ಆಯುಕ್ತರು ಜನರ ನಡುವೆ ಕೆಲಸ ಮಾಡಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು ಪಾದಚಾರಿ ಮಾರ್ಗಗಳು, ನೀರು, ರಸ್ತೆಗಳು ಮತ್ತು ಇತರ ಕೆಲಸಗಳನ್ನು ಪರಿಶೀಲಿಸುತ್ತಿದ್ದಾರೆ. ಅವರು ದಿನಕ್ಕೆ 17-18 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿಯೇ ಹಿರಿಯ ಅಧಿಕಾರಿಗಳ ಜೊತೆಗೆ ಯುವ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಚುನಾವಣೆ ನಡೆಯುವವರೆಗೆ ಮಹೇಶ್ವರ ರಾವ್ ಅವರೇ ಜಿಬಿಎಯ ಮುಖ್ಯ ಆಯುಕ್ತ ಮತ್ತು ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಾಧಿಕಾರದ ಸಮಿತಿಗೆ 75 ಸದಸ್ಯರನ್ನು ನೇಮಿಸಲಾಗಿದೆ. ಬೆಂಗಳೂರಿನ ಸಮಸ್ಯೆಗಳು ರಾತ್ರೋರಾತ್ರಿ ಬಗೆಹರಿಯುವುದಿಲ್ಲ, ಆದರೆ,. ಮುಂಬರುವ ದಿನಗಳಲ್ಲಿ ಅವುಗಳನ್ನು ಪರಿಹರಿಸುತ್ತೇವೆ ಎಂಬ ವಿಶ್ವಾಸವಿದೆ ಎಂದರು.

ಪಾರದರ್ಶಕ ಆಡಳಿತಕ್ಕಾಗಿ ಸಾರ್ವಜನಿಕರು ಕೂಡ ಪಾಲಿಕೆಯೊಂದಿಗೆ ಕೈಜೋಡಿಸಬೇಕುಯ ಜನರು ತಮ್ಮ ಆಸ್ತಿಗಳನ್ನು ಪ್ರಾಮಾಣಿಕವಾಗಿ ಘೋಷಿಸಬೇಕುಯ ತೆರಿಗೆ ಪಾವತಿಸಬೇಕುಯ.“ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com