
ಬೆಂಗಳೂರು: ಗ್ರೇಟರ್‌ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಅಧಿಕಾರಿಗಳು ಒಟ್ಟು 158 ಪ್ರಕರಣದಲ್ಲಿ 9,567 ಕೆಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7,38,700 ರೂ. ದಂಡ ವಸೂಲಿ ಮಾಡಿದ್ದಾರೆ.
ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಕವರ್ ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆ ಬೆಂಗಳೂರು ತ್ಯಾಜ್ಯ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ವಶಕ್ಕೆ ಪಡೆದುಕೊಂಡಿದ್ದು, ಪ್ಲಾಸ್ಟಿಕ್ ದಾಸ್ತಾನು ಮಾಡಲಾಗಿದ್ದ ಕೆ.ಆರ್. ಮಾರುಕಟ್ಟೆ 1 ಗೋದಾಮನ್ನು ಸೀಜ್ ಮಾಡಿದ್ದಾರೆ.
ಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಮೂರು ಪ್ರಕರಣದಿಂದ 29 ಕೆಜೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 30 ಸಾವಿರ ರೂ. ದಂಡ ಸ್ವೀಕರಿಸಲಾಗಿದೆ. ಕೆ.ಆರ್. ಮಾರುಕಟ್ಟೆ ಒಂದು ಗೋದಾಮನ್ನು ಸೀಜ್ ಮಾಡಲಾಗಿದೆ.
ವೆಂಡರ್ಸ್ ಸಿ ಬ್ಲಾಕ್ ನಲ್ಲಿ 22 ಪ್ರಕರಣಗಳಿಂದ 6,310 ಕೆ ಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 3,500 ರು. ದಂಡ ವಸೂಲಿ ಮಾಡಲಾಗಿದೆ. ಅವೆನ್ಯೂ ರಸ್ತೆಯಲ್ಲಿ 17 ಪ್ರಕರಣಗಳಿಂ 300 ಕೆಜಿ ಪ್ಲಾಸ್ಟಿಕ್, 40 ಸಾವಿರ ದಂಡ ವಿಧಿಸಲಾಗಿದೆ.
ಕಲಾಸಿ ಪಾಳ್ಯದಲ್ಲಿ 150 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 24 ಪ್ರಕರಣಗಳಲ್ಲಿ 45,900 ರೂ.ದಂಡ ಸಂಗ್ರಹಿಸಲಾಗಿದೆ. ಯಶವಂತಪುರ ಮಾರುಕಟ್ಟೆಯಲ್ಲಿ 110 ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದು, 27 ಪ್ರಕರಣಗಳಲ್ಲಿ 61,800 ರೂ. ದಂಡವನ್ನು ಸಂಗ್ರಹಿಸಲಾಗಿದೆ.
ಅದೇ ರೀತಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 450 ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದು. 1,00,500 ರೂ.ದಂಡ ಸಂಗ್ರಹಿಸಲಾಗಿದೆ. ದಾಸರಹಳ್ಳಿ ಪ್ರದೇಶದಲ್ಲಿ 218 ಕೆಜಿ ಪ್ಲಾಸ್ಟಿಕ್, ಚಾಮರಾಜಪೇಟೆ, ಅಕ್ಕಿಪೇಟೆ, ಬಳೆಪೇಟೆ ಪ್ರದೇಶದಲ್ಲಿ 2,000 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 37 ಪ್ರಕರಣಗಳ ದಾಖಲಿಸಿಕೊಂಡು, 24,07 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement