
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಕಾಲ ನಿರಂತರ ಗುಡುಗು ಸಹಿತ ಭಾರೀ ಮಳೆ ಮತ್ತು ಮೋಡ ಕವಿದ ವಾತಾವರಣ ಇರುತ್ತದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ ಬಿರುಸಿನಿಂದ ಕೂಡಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 27.7 ಡಿಗ್ರಿ ಸೆಲ್ಸಿಯಸ್ ಮತ್ತು 2.8 ಮಿಮೀ ಮಳೆಯಾಗಿದೆ. ಎರಡೂ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಹಗುರ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಒಡಿಶಾ ಕರಾವಳಿಯ ಆಚೆ, ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ವ್ಯವಸ್ಥೆಯಿಂದಾಗಿ ಮಳೆಯಾಗುತ್ತಿದೆ.
ಈ ವ್ಯವಸ್ಥೆಯು ಸಮುದ್ರ ಮಟ್ಟದಿಂದ 7.6 ಕಿ.ಮೀ.ವರೆಗೆ ವಿಸ್ತರಿಸಿರುವ ಚಂಡಮಾರುತದ ಪರಿಚಲನೆಯೊಂದಿಗೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಕಡೆಗೆ ಒಳನಾಡಿನತ್ತ ಚಲಿಸುತ್ತಿದ್ದು, ತಗ್ಗು ಮಧ್ಯ ಭಾರತದ ಮೂಲಕ ಹಾದುಹೋಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಳೆಯಾಗುತ್ತಿದೆ ಎಂದು ಐಎಂಡಿ ತಿಳಿಸಿದೆ.
Advertisement