
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಗುರುವಾರ ಯೂಟ್ಯೂಬರ್ ಸಮೀರ್ ಎಂ ಡಿ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.
AI ವಿಡಿಯೋ ಬಳಸಿ ಧರ್ಮಸ್ಥಳ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಆರೋಪದ ಮೇಲೆ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಪ್ಟೆಂಬರ್ 3 ರಂದು ಬೆಳ್ತಂಗಡಿ ನ್ಯಾಯಾಲಯ ಹೊರಡಿಸಿದ ಸರ್ಚ್ ವಾರಂಟ್ ಅಡಿಯಲ್ಲಿ ಇಂದು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ವಿಧಿವಿಜ್ಞಾನ ಸಿಬ್ಬಂದಿಯೊಂದಿಗೆ, ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಲಾಗಿದೆ.
ಶೋಧದ ಬಗ್ಗೆ ಸಮೀರ್‌ಗೆ ಮುಂಚಿತವಾಗಿ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ರೆಕಾರ್ಡಿಂಗ್‌ಗಾಗಿ ಬಳಸಲಾಗಿದೆ ಎಂದು ನಂಬಲಾದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಅನ್ನು ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ ವಶಪಡಿಸಿಕೊಳ್ಳಲಾಗಿದೆ.
ಈ ಹಿಂದೆ ಪೊಲೀಸರು ಬಂಧಿಸಲು ತೆರಳಿದ್ದಾಗ ತಪ್ಪಿಸಿಕೊಂಡು ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದುಕೊಂಡಿರುವ ಸಮೀರ್, ಬಂಧನದಿಂದ ಪಾರಾಗಿದ್ದರು. ಆದ್ರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಸಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
Advertisement