ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
CM Siddaramaiah (File photo)
ಸಿದ್ದರಾಮಯ್ಯ ಸಚಿವ ಸಂಪುಟ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲಾ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂಗಳ ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್)ಗಳ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದರು.

ಇವಿಎಂಗಳ ಬಗ್ಗೆ ಜನರಲ್ಲಿ ವಿಶ್ವಾಸ ಮತ್ತು ವಿಶ್ವಾಸಾರ್ಹತೆ ಕಮ್ಮಿಯಾಗಿದೆ ಇದೆ ಎಂದು ಸಚಿವರು ತಿಳಿಸಿದರು.

"ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಪರಿಷ್ಕರಣೆ ಮಾಡಲು, ರಾಜ್ಯ ಸಚಿವ ಸಂಪುಟ ಅಗತ್ಯ ಕಾನೂನುಗಳನ್ನು ಮಾಡಲು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲು ನಿರ್ಧರಿಸಿದೆ" ಎಂದು ಎಚ್ ಕೆ ಪಾಟೀಲ್ ಹೇಳಿದರು.

"ಮುಂಬರುವ ಎಲ್ಲಾ ಚುನಾವಣೆಗಳನ್ನು ಇವಿಎಂಗಳ ಬದಲಿಗೆ ಮತಪತ್ರಗಳಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ" ಎಂದರು.

CM Siddaramaiah (File photo)
ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್, ಜಿಲ್ಲೆಯ ಜನತೆಗೆ ಮಾಡಿದ ದ್ರೋಹ: ನಿಖಿಲ್ ಕುಮಾರಸ್ವಾಮಿ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಎಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿಯೂ `ಆಶಾ ಕಿರಣ’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ `ಆಶಾ ಕಿರಣ' ಯೋಜನೆ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

CM Siddaramaiah (File photo)
Watch | ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲವೂ ಬರಲಿದೆ...: Mallikarjun Kharge

ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್

ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com