
ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸದ್ಯ ಈ ಭಾಗದಲ್ಲಿ ಸತತ ಮಳೆ ಸುರಿಯುತ್ತಿದ್ದು, ಮಧ್ಯಾಹ್ನದ ಹೊತ್ತಿಗೆ ಮಣ್ಣು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Advertisement