ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ 'ಸ್ಟಿಕ್ಕರ್' ಅಂಟಿಸಿದ ಸಿಬ್ಬಂದಿ!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.
cm siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿದೆ.

ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

cm siddaramaiah
ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭ: ಸಹಕರಿಸುವಂತೆ ನಾಗರೀಕರಿಗೆ ಮನವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com