
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿ ಜಲಪಾತದಲ್ಲಿ ಮುಳುಗಿ ಇಬ್ಬರು ಬೆಂಗಳೂರಿನ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Yedamuri Falls) ಶುಕ್ರವಾರ ನಡೆದಿದೆ.
ಎಡಮುರಿ ಫಾಲ್ಸ್ ನೋಡಲು ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ತೆರಳಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಮೃಹದೇಹಗಳನ್ನು ಹೊರ ತೆಗೆದಿದ್ದಾರೆ.
ವಿಹಾರಕ್ಕೆಂದು ಏಳು ಮಂದಿ ವಿದ್ಯಾರ್ಥಿಗಳ ತಂಡ ಬೆಂಗಳೂರಿನಿಂದ ಎಡಮುರಿ ಫಾಲ್ಸ್ ಗೆ ಬಂದಿತ್ತು. ಈಜಲು ನದಿಗೆ ಇಳಿದಾಗ ವಿಲಿಯಂ ಶ್ಯಾಂ ಮತ್ತು ವೆಂಕಟೇಶ್ ಸುಳಿಗೆ ಸಿಕ್ಕಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಸಹಪಾಠಿಗಳು ಹಾಗೂ ಸ್ಥಳೀಯರು ನಡೆಸಿದ ಪ್ರಯತ್ನ ವಿಫಲವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೆಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement