ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲು

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಲವರ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಕುರಿತು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ರಪಂದು ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ -2) ರಾಜಾ ಇಮಾಮ್ ಖಾಸಿಂ ಅವರು ಹೇಳಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು. ಬಳಿಕ ನಾನು ಕನ್ನಡದಲ್ಲೇ ಮಾತನಾಡುತ್ತೇನೆಂದು ಭಾಷಣ ಮಾಡಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರಪತಿಗಳಿಗೆ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆಂದು ಹಲವರು ಟೀಕೆಗಳನ್ನು ಮಾಡುತ್ತಿದ್ದಾರೆ.

CM Siddaramaiah
ಕನ್ನಡ ಕಲಿಯಲು ಯತ್ನ; ಎಲ್ಲಾ ಭಾಷೆ, ಸಂಪ್ರದಾಯಗಳ ಬಗ್ಗೆ ಗೌರವ ಇದೆ: ರಾಷ್ಟ್ರಪತಿ ಮುರ್ಮು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com