
ಕೊಪ್ಪಳ: ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳನ್ನು ಶೀಘ್ರದಲ್ಲೇ ದುರಸ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ರಲ್ಲಿ ಸ್ಟಾಪ್‌ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿತ್ತು. ಗೇಟ್ ಅನ್ನು ಸರಿಪಡಿಸಲು ನಮ್ಮ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದರು.
ಜಲಾಶಯವು ಹಳೆಯದಾಗಿದ್ದು, ಗೇಟ್‌ಗಳಲ್ಲಿ ಸಮಸ್ಯೆಗಳು ಎದುರಾಗಿವೆ. ಮಳೆ ಕಡಿಮೆಯಾದ ನಂತರ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುವುದು. ನಮ್ಮ ಸರ್ಕಾರ ಜನಪರವಾಗಿದ್ದು, ನಾವು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆಂದು ತಿಳಿಸಿದರು.
ಇದೇ ವೇಳೆ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳ ದಿನಾಂಕಗಳನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ಎಂದು ಹೇಳಿದರು.
Advertisement