
ಕುಂದಾಪುರ: ಬೆಂಗಳೂರಿನಿಂದ ಪ್ರವಾಸಕ್ಕೆಂದು ಹೋಗಿದ್ದ ಯುವಕರ ತಂಡವೊಂದು ಸಮುದ್ರಕ್ಕಿಳಿದು ನೀರುಪಾಲಾಗಿರುವ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಭಾನುವಾರ ನಡೆದಿದೆ.
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಈಜಾಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳ ಅಬ್ಬರಕ್ಕೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲೇ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ, ಪೊಲೀಸರು ಆಗಮಿಸಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಆರಂಭದಲ್ಲಿ ನಾಲ್ವರು ಯುವಕರು ನೀರಿನಲ್ಲಿ ಮುಳುಗಿದ್ದು, ಈ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇನ್ನೋರ್ವನ ಮೃತದೇಹ ರಕ್ಷಣಾ ಕಾರ್ಯಾಚರಣೆಯ ಕೆಲ ಸಮಯದ ಬಳಿಕ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
Advertisement