ಮದ್ದೂರು ಗಲಭೆ ಪ್ರಕರಣದಲ್ಲಿ 21 ಮಂದಿ ಮುಸಲ್ಮಾನರ ಬಂಧನ: ಸಚಿವ ಚೆಲುವರಾಯಸ್ವಾಮಿ

ಮದ್ದೂರು ಘಟನೆ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ.
Minister Chaluvarayaswamy
ಸಚಿವ ಚಲುವರಾಯಸ್ವಾಮಿ
Updated on

ಬೆಂಗಳೂರು: ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ 21 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಮುಸಲ್ಮಾನರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಮಸೀದಿ ಕಡೆಯಿಂದ ಕಲ್ಲು ತೂರಾಟ ಮೊದಲು ನಡೆಯಿತು ಎಂಬ ಬಗ್ಗೆ ಮಾಹಿತಿಯಿದೆ. ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ. ಹಾಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್​​​ನವರು ಪ್ರತಿಭಟನೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮದ್ದೂರು ಘಟನೆ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ. ಅದರಲ್ಲಿ ಹೊರಗಡೆಯ ಒಂದಿಬ್ಬರು ಮೂರು ಜನ ಇರಬಹುದು ಎನ್ನಲಾಗಿದೆ. ಹಿಂದೂಗಳ ಮೇಲೆ ಯಾವುದೇ ಕೇಸ್ ಹಾಕಿಲ್ಲ, ಯಾರನ್ನೂ ಬಂಧಿಸಿಲ್ಲ ಎಂದರು.

Minister Chaluvarayaswamy
ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಜ್; 21 ಮಂದಿ ಬಂಧನ; Video

ವಿರೋಧ ಪಕ್ಷಗಳಿಂದ ರಾಜಕೀಯ

ಬಹುಶಃ ಇಷ್ಟು ಬೇಗ ಯಾವುದೇ ಪ್ರಕರಣದಲ್ಲಿ ಕ್ರಮ ಆಗಿಲ್ಲ. ಕಲ್ಲೆಸಸತ ಮಾಡಿದವರ ಮೇಲೆ ಕ್ರಮ ಜರುಗಿಸಿದ ಮೇಲೆ ಅವರು (ಬಿಜೆಪಿ, ಜೆಡಿಎಸ್) ಕೇಳುವುದಾದರೆ ಹೆಚ್ಚುವರಿ ತನಿಖೆ ಕೇಳಬಹುದಿತ್ತು. ಇನ್ನೂ ಹೆಚ್ಚಿನ ಕ್ರಮ ತಗೆದುಕೊಳ್ಳಿ ಎನ್ನಬಹುದಿತ್ತು. ಅದು ಬಿಟ್ಟು ಪ್ರತಿಭಟನೆ ನೆಪದಲ್ಲಿ ಕೋಮುಗಲಭೆ ಮಾಡುವಂತ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ನಮ್ಮ ಸರ್ಕಾರದ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಪಕ್ಷಗಳನ್ನು ಕಟ್ಟಿಹಾಕಿವೆ. ಈಗ ವಿಧಾನಸಭೆಯಲ್ಲಿ ಅವರು ವಿಫಲರಾಗಿದ್ದಾರೆ. ಅವರಿಗೆ ಯಾವ ವಿಚಾರವೂ ಸಿಗದೇ ಇದ್ದಾಗ ಕೋಮುಗಲಭೆ ಒಂದೇ ಪ್ರಮುಖವಾಗಿ ಕಂಡಿದೆ. ಅವರಿಗೆ ಪಕ್ಷ ಸಂಘಟನೆ ಮಾಡಲು ಉಳಿದಿರುವ ಅಸ್ತ್ರ ಇದೊಂದೇ ಆಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗಲೀ, ಜನತಾ ದಳದ ನಾಯಕರಾಗಲೀ ಅಥವಾ ಯಾವುದೇ ಸಂಘಟನೆ ಅವರಾಗಲೀ ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದರೆ ಜನಪರ ವಿಚಾರ ಎತ್ತಿಕೊಂಡು ಮಾತನಾಡಲಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com