
ಬೆಂಗಳೂರು: ಇತ್ತೀಚೆಗೆ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದು ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 8 ರಿಂದ 10ರವರೆಗೂ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಯೆಲ್ಲೋ ಅಲರ್ಟ್
ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement