'ಇಂದು ಚಂದ್ರ ಗ್ರಹಣ, ಡೆಲಿವರಿ ಬೇಡ ಪ್ಲೀಸ್': ಹೆರಿಗೆಗೆ ಒಪ್ಪದ ಮಹಿಳೆಯರು, ಮನವೊಲಿಸಲು ವೈದ್ಯರು ಹೈರಾಣ!

ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾದರೆ, ಅದು ಮಗು ಹಾಗೂ ತಾಯಿ ಇಬ್ಬರಿಗೂ ಅಪಾಯವನ್ನುಂಟು ಮಾಡುತ್ತದೆ ಎಂಬ ನಂಬಿಕೆಯಿಂದಾಗಿ ಹಲವು ಮಹಿಳೆಯರು ಹೆರಿಗೆ ಮುಂದೂಡುವಂತೆ ವೈದ್ಯರನ್ನು ಒತ್ತಾಯಿಸಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಗ್ರಹಣವನ್ನು ಕೆಲವರು ವೈಜ್ಞಾನಿಕ ದೃಷ್ಟಿಯಿಂದ ನೋಡಿದರೆ, ಮತ್ತೆ ಕೆಲವರು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಹಿನ್ನೆಲೆಯಿಂದ ನೋಡುತ್ತಾರೆ. ಗ್ರಹಣದ ವೇಳೆ ಊಟ ಮಾಡಬಾರದು, ಪೂಜೆ ಮಾಡಬಾರದು, ದೇವರಿಗೆ ನಮಸ್ಕರಿಸಬಾರದು, ದೇವರ ದರ್ಶನ ಮಾಡಬಾರದು...ಹೀಗೆ ಹಲವು ಸಂಪ್ರದಾಯಗಳನ್ನು ಆಚರಿಸಲಾಗುತ್ತದೆ.

ಅಂತೆಯೇ ಗ್ರಹಣದ ಸಮಯವನ್ನು ಗರ್ಭಿಣಿ ಮಹಿಳೆಯರಿಗೆ ಸೂಕ್ಷ್ಮ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣ ಗರ್ಭಿಣಿಯರಿಗೆ ಒಳ್ಳೆಯದಲ್ಲ ಎಂಬುದು ಸಾಮಾನ್ಯ ನಂಬಿಕೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಾರೆ.

ಏತನ್ಮಧ್ಯೆ ವರ್ಷದ ಎರಡನೇ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಘಟಿಸಿದ್ದು, ಚಂದ್ರಗ್ರಹಣದ ದಿನದಂದು ಸಾಕಷ್ಟು ಗರ್ಭಿಣಿ ಮಹಿಳೆಯರು ಹೆರಿಗೆಗೆ ನಿರಾಕರಿಸಿರುವ ಬೆಳಣಿಗೆಗಳು ಕಂಡು ಬಂದಿದೆ.

ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಇಂತಹ ಬೆಳವಣಿಗೆಗಳು ಕಂಡು ಬಂದಿದೆ. ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾದರೆ, ಅದು ಮಗು ಹಾಗೂ ತಾಯಿ ಇಬ್ಬರಿಗೂ ಅಪಾಯವನ್ನುಂಟು ಮಾಡುತ್ತದೆ ಎಂಬ ನಂಬಿಕೆಯಿಂದಾಗಿ ಹಲವು ಮಹಿಳೆಯರು ಹೆರಿಗೆ ಮುಂದೂಡುವಂತೆ ವೈದ್ಯರನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ಸಲಹೆಗಳನ್ನು ನೀಡಿದರೂ ಗರ್ಭಿಣಿಯರು ಹೆರಿಗೆಗೆ ಒಪ್ಪಲೇ ಇಲ್ಲ. ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾಗುವುದರಿಂದ ಶಿಶು ಮತ್ತು ತಾಯಿ ಇಬ್ಬರಿಗೂ ಅಪಾಯ ಎದುರಾಗಬಹುದು ಎಂಬ ನಂಬಿಕೆಯನ್ನು ಪ್ರತಿಪಾದಿಸಿದ್ದಾರೆ.

File photo
ಬಾನಂಗಳದಲ್ಲಿ 'Blood Moon': ಅಪರೂಪದ ಸಂಪೂರ್ಣ ಚಂದ್ರ ಗ್ರಹಣ ಗೋಚರ

ನಂತರ ಇಬ್ಬರು ಗರ್ಭಿಣಿಯರಲ್ಲಿ ಆಮ್ಲಜನಕದ ಮಟ್ಟ ಕಡಿಮೆಯಾಗಲು ಶುರುವಾಗಿ ಪರಿಸ್ಥಿತಿ ಉಲ್ಬಣಗೊಂಡಿತು. ಇದರಿಂದಾಗಿ ಆಸ್ಪತ್ರೆ ಅಧಿಕಾರಿಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕಾಯಿತು. ಹಿರಿಯ ವೈದ್ಯರು ವಾರ್ಡ್‌ಗೆ ಧಾವಿಸಿ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ತಕ್ಷಣದ ಆರೋಗ್ಯ ಅಪಾಯಗಳ ಬಗ್ಗೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯರನ್ನು ಹೆರಿಗೆ ಮಾಡಿಸಿಕೊಳ್ಳುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.

ಕೆಲವು ಅತಿಯಾದ ನಂಬಿಕೆಗಳು ಮಹಿಳೆಯರಲ್ಲಿ ಇದ್ದುದರಿಂದ ಹೆರಿಗೆ ನೋವು ಅನುಭವಿಸುತ್ತಿರುವವರು ಕೂಡ ಹೆರಿಗೆ ಮುಂದೂಡುವಂತೆ ಮನವಿ ಮಾಡಿದ್ದರು. ಅಂತಹ ಅತಿಯಾದ ನಂಬಿಕೆ, ಕಲ್ಪನೆಗಳನ್ನು ನಿರ್ಲಕ್ಷಿಸುವುದು ಅತ್ಯಗತ್ಯ ಎಂದು ಬಳ್ಳಾರಿಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಮೇಶ್ ಬಾಬು ವೈ ಅವರು ಹೇಳಿದ್ದಾರೆ,

ಮಹಿಳೆಯರು ಹೆರಿಗೆ ನೋವು ಅಥವಾ ಗರ್ಭಧಾರಣೆಗೆ ಸಂಬಂಧಿಸಿದ ಇತರ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದಾಗಲೆಲ್ಲಾ, ಶುಭ ಅಥವಾ ಅಶುಭ ಸಮಯಗಳ ಬಗ್ಗೆ ಮೂಢನಂಬಿಕೆಗಳನ್ನು ಪರಿಗಣಿಸದೆ ತಕ್ಷಣ ಕ್ರಮ ಕೈಗೊಳ್ಳಬೇಕು. ಭಾನುವಾರ ನಡೆದ ಕೊನೆಯ ಚಂದ್ರಗ್ರಹಣದ ಸಮಯದಲ್ಲಿ ನಮ್ಮ ವೈದ್ಯಕೀಯ ಸಿಬ್ಬಂದಿ ಇದೇ ರೀತಿಯ ಸನ್ನಿವೇಶವನ್ನು ಎದುರಿಸಿದರು, ಆದರೆ, ಅವರು ಹಿಂಜರಿಯದೆ ಏನು ಮಾಡಬೇಕೋ ಅದನ್ನು ಮಾಡಿದರು. ಆ ದಿನ ಹಲವಾರು ಹೆರಿಗೆಗಳಿಗೆ ಅನುಕೂಲ ಮಾಡಿಕೊಟ್ಟರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com