ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ಇಂದು ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದವು.
Ganesha immersion procession
ಸಾಮೂಹಿಕ ಗಣೇಶ ವಿಸರ್ಜನೆ
Updated on

ಮಂಡ್ಯ: ಕಳೆದ ಭಾನುವಾರ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು.

ಇಂದು ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದವು.

11.45ಕ್ಕೆ ಮದ್ದೂರು ಪಟ್ಟಣದ ಕಾಶಿ ವಿಶ್ವನಾಥ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಹೊಳೆಬೀದಿ,ಪೇಟೆ ಬೀದಿ, ಟಿಬಿ ಸರ್ಕಲ್‌, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಮೂರು ಕಿಲೋ ಮೀಟರ್‌ ಸಂಚರಿಸಿ ಕೊಲ್ಲಿ ಸರ್ಕಲ್‌ ಮೂಲಕ ಆಗಮಿಸಿ ಶಿಂಷಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಬೂದಿ ಮುಚ್ಚಿದ ಕೆಂಡದಂತಿದ್ದ ಮದ್ದೂರು ಪಟ್ಟಣದಲ್ಲಿ ನಡೆದ ಗಣಪತಿ ವಿಸರ್ಜನೆಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಸಹ ಭಾಗವಹಿಸಿ ಬೆಂಬಲ ನೀಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ಆರ್‌.ಅಶೋಕ್‌ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಶಾಸಕ ಚನ್ನಬಸಪ್ಪ, ಮಾಜಿ ಸಚಿವರಾದ ಸಿ.ಟಿ.ರವಿ, ಪುಟ್ಟರಾಜು, ಡಾ.ಅಶ್ವತ್ಥ ನಾರಾಯಣ, ನಟಿ ಸುಮಲತಾ ಅಂಬರೀಶ್‌, ಮಾಜಿ ಶಾಸಕರಾದ ಪ್ರೀತಂಗೌಡ, ಸುರೇಶ್‌ಗೌಡ, ತಮಣ್ಣ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು.

ಸರ್ಕಾರದ ವಿರುದ್ಧ ವಾಗ್ದಾಳಿ

ಈ ವೇಳೆ ಮಾತನಾಡಿದ ವಿಜಯೇಂದ್ರ, ಆರ್ ಅಶೋಕ್‌, ಸಿ.ಟಿ.ರವಿ ಸೇರಿದಂತೆ ಅನೇಕರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರದ ತುಷ್ಟೀಕರಣದಿಂದಲೇ ಇಂದು ಹಿಂದೂಗಳ ಆರಾಧ್ಯದೈವ ಗಣೇಶನ ಮೆರವಣಿಗೆ ನಡೆಸದಂತಹ ಪರಿಸ್ಥಿತಿಯನ್ನು ಸರ್ಕಾರ ನಿರ್ಮಾಣ ಮಾಡಿದೆ. ಇದೇನು ಪ್ರಜಾಪ್ರಭುತ್ವ ವ್ಯವಸ್ಥೆಯೋ ಇಲ್ಲ ತಾಲಿಬಾನ್‌ ಸರ್ಕಾರವೋ ಎಂದು ಕಿಡಿಕಾರಿದರು.

ಕೆಲವರು ವೋಟ್‌ಬ್ಯಾಂಕ್‌ಗಾಗಿ ಈ ಮತಾಂಧರನ್ನು ನಮ ಬ್ರದರ್‌ರ‍ಸ ಎಂದು ಕರೆಯುತ್ತಾರೆ. ನಾವು ಏನೇ ಮಾಡಿದರೂ ಸರ್ಕಾರ ಕಾಪಾಡುತ್ತದೆ ಎಂಬ ಮಾನಸಿಕ ಸ್ಥಿತಿಯಲ್ಲಿರುವ ಜಿಹಾದಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ಎಸೆಯುತ್ತಾರೆ. ಇದಕ್ಕೆ ಸರ್ಕಾರದ ಕುಮಕ್ಕು ಇದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

Ganesha immersion procession
ಮದ್ದೂರಿನಲ್ಲಿಂದು ಸಾಮೂಹಿಕ ಗಣೇಶ ವಿಸರ್ಜನೆ: ಭದ್ರತೆ ಹೆಚ್ಚಳ; ಶಾಂತಿಯುತವಾಗಿ ಭಾಗವಹಿಸುವಂತೆ ಜನರಿಗೆ ಸರ್ಕಾರ ಮನವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com