Lokayukta Raid: ಬೀದರ್ ಪಶು ವೈದ್ಯಕೀಯ ವಿವಿ ಭ್ರಷ್ಟಾಚಾರ ಆರೋಪ, ರಾಜ್ಯದ 69 ಕಡೆ ದಾಳಿ

ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿಗಳ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.
Lokayukta raid
ಲೋಕಾಯುಕ್ತ ದಾಳಿ
Updated on

ಬೆಂಗಳೂರು: ರಾಜ್ಯದ ವಿವಿಧ ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕದ 69 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು. 2021ರಲ್ಲಿ ವಿವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬಿಕರ್, ಐಜಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.

ಬೀದರ್‌ನಲ್ಲಿ ಒಟ್ಟು 25 ಕಡೆ ದಾಳಿ

ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿಗಳ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ಲೋಕಾಯುಕ್ತ ದಾಳಿ

ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು ಜಿಲ್ಲೆಯ 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

Lokayukta raid
TNIE ವರದಿ ಫಲಶ್ರುತಿ: ಶಿಳ್ಳೆಕ್ಯಾತ ಸಮುದಾಯಕ್ಕೆ ಸ್ಮಶಾನ ಭೂಮಿ ನಿರಾಕರಣೆ ಕುರಿತು ಲೋಕಾಯುಕ್ತ ಪರಿಶೀಲನೆ; ಸ್ವಯಂಪ್ರೇರಿತ ಪ್ರಕರಣ ದಾಖಲು

28 ಕೋಟಿ ಅವ್ಯವಹಾರ ಬಯಲು

ವಿಶ್ವವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಇದೆ. 2021ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆ ವೇಳೆ ಸುಮಾರು 28 ಕೋಟಿ ಅವ್ಯವಹಾರ ಬಯಲಿಗೆ ಬಂದಿದೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಎಂಟರ್ಪ್ರೈಸ್ ಜೊತೆ ಶಾಮೀಲಾಗಿ ಪೀಠೋಪಕರಣ, ಸ್ಟೇಷನರಿ ಖರೀದಿಯಲ್ಲಿ ಅಕ್ರಮ ಎಸಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com