
ಬೆಂಗಳೂರು: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರು ಪಿಯುಸಿ ವಿದ್ಯಾರ್ಥಿಗಳು, ಶಾಲೆಯ ಪ್ರಾಂಶುಪಾಲ ಮತ್ತು ಹಾಸ್ಟೆಲ್ ವಾರ್ಡನ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ರ‍್ಯಾಗಿಂಗ್ ಕುರಿತು ಸಂತ್ರಸ್ತ ಬಾಲಕ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಪ್ರಾಂಶುಪಾಲರಾಗಲೀ, ವಾರ್ಡನ್ ಆಗಲೀ ಯಾವುದೇ ಕ್ರಮಕೈಗೊಂಡಿಲ್ಲ.
ಈ ನಡುವೆ ದೂರು ನೀಡಿದ್ದಕ್ಕೆ ಕೋಪಗೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದು. ಕಬ್ಬಿಣದ ಹ್ಯಾಂಗರ್ ನಿಂದ ಹಲ್ಲೆ ನಡೆಸಿದ್ದಾರೆ.
ಘಟನೆ ಬಳಿಕ ಸಂತ್ರಸ್ತ ವಿದ್ಯಾರ್ಥಿಯ ತಂದೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ಹಿನ್ನೆಲೆಯಲ್ಲಿ ಪೊಲೀಸರು ಐವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಶಾಲೆಯ ಪ್ರಾಂಶುಪಾಲ ಹಾಗೂ ಹಾಸ್ಟೆಲ್ ವಾರ್ಡನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಐವರು ವಿದ್ಯಾರ್ಥಿಗಳು, ವಾರ್ಡನ್ ಮತ್ತು ಪ್ರಾಂಶುಪಾಲರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ವಿದ್ಯಾರ್ಥಿಗಳನ್ನು ಮತ್ತೆ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement