
ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮಾನ್ಸೂನ್ ಮತ್ತೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಆಂಧ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 15ರಂದು ಈ ವಾಯುಭಾರ ಕುಸಿತವು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ಅಲ್ಲಿ ತನಕ ಭಾರೀ ಮಳೆಯಾಗಲಿದೆ.
ಐಎಂಡಿಯ ಹಿರಿಯ ವಿಜ್ಞಾನಿ ಸಿಎಸ್ ಪಾಟೀಲ್ ಅವರು ಮಾತನಾಡಿ, ಈ ವರ್ಷ ಮಾನ್ಸೂನ್ ಉತ್ತಮವಾಗಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 11 ರಿಂದ ಮೋಡಕವಿದ ವಾತಾವರಣ ಇರಲಿದ್ದು, ಸೆಪ್ಟೆಂಬರ್ 12 ರಿಂದ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಐಎಂಡಿ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಹಗಲಿನ ಗರಿಷ್ಠ ತಾಪಮಾನವು ಸುಮಾರು 28-29°C ಆಗಿರುತ್ತದೆ.
ಎಚ್ಚರಿಕೆಯನ್ನು ಸಹ ನೀಡಿದೆ. ತಾಪಮಾನದ ಸ್ಥಿರತೆಯನ್ನು ನಿರೀಕ್ಷಿಸಲಾಗಿದೆ, ಹಗಲಿನ ಗರಿಷ್ಠ ತಾಪಮಾನವು ಸುಮಾರು 28-29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
Advertisement